Fri. Apr 4th, 2025

ಪ್ರಜ್ವಲ್‌ನನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ:ಸಿದ್ದರಾಮಯ್ಯ

Share this with Friends


ಯಾದಗಿರಿ,ಮೇ, 01: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯಾದಗಿರಿ ಜಿಲ್ಲೆ ದೇವತ್ಕಲ್‌ನಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗಲು ಪಾಸ್‌ಪೋರ್ಟ್ ಯಾರು ಕೊಟ್ಟಿದ್ದು ಕೇಂದ್ರ ಸರ್ಕಾರಾನೆ ತಾನೆ ಯಾಕೆ ಕೊಟ್ಟರು ಎಂದು ಗರಂ ಆದರು.

ಕೇಂದ್ರ‌‌ ಸರ್ಕಾರಾನೆ ಪ್ರಜ್ವಲ್ ನನ್ನ ವಿದೇಶದಿಂದ ಕರೆಸಬೇಕು ಎಂದು ಸಿಎಂ ಆಗ್ರಹಿಸಿದರು.


Share this with Friends

Related Post