Mon. Dec 23rd, 2024

ಪ್ರಜ್ವಲ್ ವಿಡಿಯೋ ಪ್ರಕರಣ-ಸರ್ಕಾರಗಂಭೀರವಾಗಿ ಪರಿಗಣಿಸಿದೆ:ಪರಮೇಶ್ವರ್

Share this with Friends

ಬೆಂಗಳೂರು,ಏ.28: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ, ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣದ ತನಿಖೆಯಾಗಲಿದೆ, ಪ್ರಜ್ವಲ್ ರೇವಣ್ಣಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟಿದ್ದು ಎಂದು ಪರಮೇಶ್ವರ್ ತಿಳಿಸಿದರು.


Share this with Friends

Related Post