Mon. Dec 23rd, 2024

ಪ್ರತಾಪ್ ಸಿಂಹ ಅದ್ಬುತವಾಗಿ ಕೆಲಸ ಮಾಡಿದ್ದಾರೆ:ಅಶ್ವಥ್ ನಾರಾಯಣ ಶ್ಲಾಘನೆ

Share this with Friends

ಮೈಸೂರು,ಫೆ.15: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅದ್ಬುತವಾಗಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಹಾಡಿ ಹೊಗಳಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ, ಆರೋಗ್ಯ, ಶಿಕ್ಷಣ, ಕುಡಿಯವ ನೀರು ಸೇರಿ ಎಲ್ಲಾ ಕಡೆ ಅತ್ಯತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಮೈಸೂರು ಜಿಲ್ಲೆಯಲ್ಲಿ ಅನುಭವಿಗಳಿದ್ದಾರೆ, ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಆಶಯವಾಗಿದೆ. 400ಕ್ಕೂ ಹೆಚ್ಚು ಸೀಟುಗಳನ್ನು ಎನ್ ಡಿಎ ಮೈತ್ರಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. ಮೈಸೂರಿನ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೊಡಗು ಮೈಸೂರು ಎಲ್ಲಾ ಕ್ಷೇತ್ರದಲ್ಲೂ ಮತ್ತೊಮ್ಮೆ ನಮ್ಮ ಅಭ್ಯರ್ಥಿ ಮತ್ತೆ ಆಯ್ಕೆಯಾಗಬೇಕು ಎಂದು ಹೇಳಿದರು.

ರಾಮಲಲ್ಲಾ‌ ಕೆತ್ತಿದ ಶಿಲ್ಪಿ ಹಾಗೂ ಕಲ್ಲು ಮೈಸೂರಿನದ್ದೇ. ಮೈಸೂರು ಇಡೀ ವಿಶ್ವದ ಗಮನ ಸೆಳೆಯುತ್ತದೆ ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ಹಿಂದಿನ ಅವಧಿಯ ಕೆಲಸದ ದಾಖಲೆ ಇಟ್ಟಿದ್ದಾರೆ. ಅದಕ್ಕಾಗಿ ಬುಕ್‌ ಲೆಟ್ ಕೂಡಾ ಮಾಡಿಸಿದ್ದಾರೆ ಎಂದು ಅವರು ತಿಳಿಸಿದರು.

ಮಾಜಿ ಸಚಿವ ಎಸ್. ಎ ರಾಮದಾಸ್ ಮಾತನಾಡಿ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾರ್ಯಾಲಯ ಸಮನ್ವಯ ಕೇಂದ್ರವಾಗಲಿದ್ದು, ಯೋಜನೆಯ ಕಾರ್ಯತಂತ್ರ ಈ ಕಾರ್ಯಾಲಯದಲ್ಲೇ ಆಗಲಿದೆ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್ ಒಟ್ಟಿಗೆ ಕೆಲಸ ಮಾಡುತ್ತೇವೆ,ಈ ಬಾರಿ ಮೋದಿ ಅವರ ಎರಡನೇ ಆವೃತ್ತಿಯಲ್ಲಿ ಆದ ಅಭಿವೃದ್ಧಿ ಮೂಲಕ ಮತಯಾಚನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೈಸೂರು- ಲೋಕಸಭಾ ಕ್ಷೇತ್ರ ನಿಶ್ಚಿತವಾಗಿ ಗೆಲ್ಲುತ್ತೇವೆ. ಸಿಎಂ, ಡಿಸಿಎಂ ಮೈಸೂರು ಬಗ್ಗೆ ಹೆಚ್ಚು ಗಮನಹರಿಸುತ್ತಾರೆ ಆದರೂ ಮೈಸೂರು ಭಾಗದ ನಾಲ್ಕು ಕ್ಷೇತ್ರ ಬಿಜೆಪಿ ತೆಕ್ಕೆಗೆ ಬರಲಿವೆ ಎಂದು ಎಸ್ ಎ ರಾಮದಾಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರತಾಪ್ ಸಿಂಹ,ಮಾಜಿ ಶಾಸಕರಾದ ಎಲ್.ನಾಗೇಂದ್ರ ವಿಜಯಶಂಕರ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು.


Share this with Friends

Related Post