Fri. Apr 11th, 2025

ಉತ್ತರಾಖಂಡದ ಯುಸಿಸಿ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

Share this with Friends

ಡೆಹ್ರಾಡೂನ್,ಮಾ.14: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ಅನುಮೋದನೆ ನೀಡಿದ್ದಾರೆ.

ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಉತ್ತರಾಖಂಡ ಯುಸಿಸಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾದಂತಾಗಿದೆ.

ಉತ್ತರಾಖಂಡದ ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಫೆ.29 ರಂದು ರಾಜ್ಯ ಸರ್ಕಾರ ಕಳುಹಿಸಿದ್ದ ಮಸೂದೆಯನ್ನು ರಾಷ್ಟ್ರಪತಿ ಮುರ್ಮು ಅವರ ಅನುಮೋದನೆಗೆ ಕಳುಹಿಸಿದ್ದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸರ್ಕಾರ ಫೆ.6 ರಂದು ಯುಸಿಸಿ ಮಸೂದೆಯನ್ನು ಮಂಡಿಸಿ, ಅದರ ಮಹತ್ವವನ್ನು ಒತ್ತಿಹೇಳಿತ್ತು.

ವಿಧಾನಸಭೆಯಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರು,ಏಕರೂಪ ನಾಗರಿಕ ಸಂಹಿತೆ ಮಸೂದೆಯ ಅಂಗೀಕಾರವು ಉತ್ತರಾಖಂಡದ ಇತಿಹಾಸದಲ್ಲಿ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದರು.

ಎಲ್ಲಾ ಸಮುದಾಯಗಳಿಗೆ ಒಂದೇ ರೀತಿಯ ಅಥವಾ ಏಕರೂಪದ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆಯನ್ನು ಮುಖ್ಯಮಂತ್ರಿಯವರು ಫೆ.7 ರಂದು ವಿಶೇಷ ಅಧಿವೇಶನದಲ್ಲಿ ಮಂಡಿಸಿ
ಬಹುಮತದೊಂದಿಗೆ ಅಂಗೀಕರಿಸಲಾಗಿತ್ತು.

ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕುಗಳು ಇದರಲ್ಲಿ ಸೇರಿವೆ. ಯುಸಿಸಿ ಎಲ್ಲಾ ನಾಗರಿಕರಿಗೆ ಅವರ ಧರ್ಮ, ಲಿಂಗ ಅಥವಾ ಲೈಂಗಿಕ ದೃಷ್ಟಿಕೋನವನ್ನು ಲೆಕ್ಕಿಸದೆ ಸಮಾನವಾಗಿ ಅನ್ವಯಿಸುತ್ತದೆ.


Share this with Friends

Related Post