ಮೈಸೂರು,ಜೂ.8: ಸಮೀಪದಲ್ಲೇ ಕಪಿಲೆ ತುಂಬಿ ಹರಿಯುತ್ತಿದ್ದರೂ ಮೈಸೂರು ಜಿಲ್ಲೆ ನಂಜನಗೂಡಿನ ಗೋಳೂರು ಗ್ರಾಮಸ್ಥರು ನೀರಿಗಾಗಿ ಪರಿತಪಿಸುತ್ತಿದ್ದಾರೆ.
ಮಹಿಳೆಯರು ಪ್ರತಿದಿನ ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುತ್ತಲೇ ಇದ್ದರೂ ಕೇಳುವವರು ಇಲ್ಲದಂತಾಗಿದೆ.
ಸುಮಾರು 3 ಸಾವಿರ ಕುಟುಂಬಗಳಿರುವ ಈ ಗ್ರಾಮ ನಿರ್ಲಕ್ಷ್ತಕ್ಕೆ ಒಳಗಾಗಿದೆ,ಕುಡಿಯುವ ನೀರಿಗೂ ತೊಂದರೆ ಪಡುತ್ತಿದ್ದೇವೆ,
ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳಿಗೆ ಈ ಗ್ರಾಮ ನೆನಪಿಗೆ ಬರುತ್ತದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ಮಹಿಳೆಯರು
ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.
ನೀರಿನ ಸಮಸ್ಯೆ ಬಗೆಹರಿಯದಿದ್ದಲ್ಲಿ ಜನರು ದಂಗೆ ಏಳುವ ಸಮಯ ದೂರವಿಲ್ಲ,ತಕ್ಷಣವೇ ಜನಪ್ರತಿನಿಧಿಗಳು,ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.