Mon. Dec 23rd, 2024

ಪಿಎಸ್‌ಐ ಪರಶುರಾಮ್ ಸಾವು: ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

Share this with Friends

ಯಾದಗಿರಿ,ಆ.3: ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮೃತ ಪಿಎಸ್‌ಐ ಪತ್ನಿ ಶ್ವೇತಾ ಅವರು ಯಾದಗಿರಿ ಟೌನ್ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು,ಹಾಗಾಗಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.

ಶಾಸಕರು ಹಣ ನೀಡುವಂತೆ ನಿರಂತರ ಒತ್ತಡ ಹೇರುತ್ತಿದ್ದರು ಎಂದು ಶ್ವೇತಾ ದೂರಿನಲ್ಲಿ ತಿಳಿಸಿದ್ದಾರೆ.

ಚೆನ್ನಾರೆಡ್ಡಿ ವಿರುದ್ಧ ಪ್ರಕರಣ ದಾಖಲಿಸ ಬಂಧಿಸಬೇಕೆಂದು ಆಗ್ರಹಿಸಿ ದಲಿತ ಸಂಘಟನೆಗಳ ಸದಸ್ಯರು ಭಾರೀ ಪ್ರತಿಭಟನೆ ನಡೆಸಿದ್ದರು.

ಕಡೆಗೂ ಪ್ರತಿಭಟನೆಗೆ ಮಣಿದ ಪೊಲೀಸರು ಪಿಎಸ್ಐ ಪರಶುರಾಮ್ ಮೃತಪಟ್ಟ ಹಲವು ಗಂಟೆಗಳ ನಂತರ ಶಾಸಕ ಮತ್ತು ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದು,ಚೆನ್ನಾರೆಡ್ಡಿ ಹಾಗೂ ಪತ್ರ ಪಂಪನಗೌಡ ಬಂಧನ ಭೀತಿಯಲ್ಲಿದ್ದಾರೆ.

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ನಿನ್ನೆ ಸಾವಿಗೀಡಾಗಿದ್ದಾರೆ.

ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು.

ಅವರು ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದು, ಶಾಸಕ ಚೆನ್ನಾರೆಡ್ಡಿ ಮತ್ತು ಪುತ್ರ ಪಂಪನಗೌಡ ಅವರ ಹಣದ ಒತ್ತಡವೇ ಸಾವಿಗೆ ಕಾರಣ ಎಂದು ಆರೋಪ ಕೇಳಿಬಂದಿದೆ.


Share this with Friends

Related Post