Mon. Dec 23rd, 2024

ಏ.10ಕ್ಕೆ ದ್ವಿತೀಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ

PUC Result
Share this with Friends

ಬೆಂಗಳೂರು.ಎ.02 : ಇದೇ ಏ.10ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದ್ದು ಇದೆ ತಿಂಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಸರ್ಕಾರಿ, ಅನುದಾನಿತ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳ 40 ಸಾವಿರಕ್ಕೂ ಹೆಚ್ಚು ಉಪನ್ಯಾಸಕರನ್ನು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಈಗಾಗಲೇ ಕಲಾ, ವಾಣಿಜ್ಯ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಬೆಂಗಳೂರು ಕೇಂದ್ರಗಳಲ್ಲಿ ನಡೆಯುತ್ತಿರುವ ವಿಜ್ಞಾನ ವಿಷಯಗಳ ಮೌಲ್ಯಮಾಪನ ಏ.5ರ ಒಳಗೆ ಪೂರ್ಣಗೊಳ್ಳಲಿದೆ.

ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರದಲ್ಲಿ ನೀಡಲಾದ ನೋಂದಣಿ ಸಂಖ್ಯೆ ಬಳಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ನೀಡುವ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಿ ಫಲಿತಾಂಶ ಚೆಕ್ ಮಾಡಬಹುದು.


Share this with Friends

Related Post