ಬೆಳಗಾವಿ: ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗಿದ್ದಾರೆ,12 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 18 ತಿಂಗಳು ಕಳೆದಿವೆ.17 ತಿಂಗಳಾದರೂ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ. ಆದರೆ 17 ತಿಂಗಳಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು ವ್ಯಂಗ್ಯ ವಾಡಿದರು.
ಸಿದ್ದರಾಮಯ್ಯ ಕಳೆದ ಬಾರಿಯ ಆಡಳಿತವನ್ನು ಕೊಡುತ್ತಿಲ್ಲ.ಈ ಬಾರಿ ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗ ನಿದ್ದೆರಾಮಯ್ಯ ಆಗಿದ್ದಾರೆ. ಜೊತೆಗೆ ಸರ್ಕಾರವು ಕೂಡ ನಿದ್ದೆಯಲ್ಲಿದೆ ಎಂದು ವ್ಯಂಗ್ಯವಾಡಿದರು.
ಬೆಳಗಾವಿ ಜಿಲ್ಲೆಯೊಂದರಲ್ಲಿಯೇ ಮುನ್ನೂರಕ್ಕೂ ಹೆಚ್ಚು ನವಜಾತ ಶಿಶುಗಳ ಸಾವಾಗಿದೆ. ಸಿದ್ದರಾಮಯ್ಯ ಹೊಸದಾಗಿ ಬಂದಾಗ ಪ್ರತಿ ತಿಂಗಳು ಜನತಾದರ್ಶನ ಮಾಡುತ್ತೇನೆ ಎಂದಿದ್ದರು. ಆದರೆ ಮಂತ್ರಿಗಳು ದುಡ್ಡು ಮಾಡುವುದರಲ್ಲಿ ಮುಳುಗಿದ್ದಾರೆ. ಜಿಲ್ಲೆಗಳಿಗೆ ಮಂತ್ರಿಗಳು ಭೇಟಿ ಕೊಡುತ್ತಿಲ್ಲ. ದುಡ್ಡು ಮಾಡಲು ಮಾತ್ರ ಜಿಲ್ಲೆಗಳಿಗೆ ಹೋಗುತ್ತಾರೆ ಎಂದು ಅಶೋಕ್ ಆರೋಪಿಸಿ ದರು.