ಸುಲ್ತಾನ್‌ಪುರ : 2018ರಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಅಕ್ಷೇಪಾರ್ಹ ಹೇಳಿಕೆ ಕುರಿತು ಬಿಜೆಪಿ ನಾಯಕರೊಬ್ಬರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಲ್ತಾನ್‌ಪುರ ವಿಶೇಷ ನ್ಯಾಯಾಲಯವನ್ನು ರಾಹುಲ್ಗೆ ಜಾಮೀನು ಮಂಜೂರು ಮಾಡಿದೆ.
ರಾಹುಲ್ ಗಾಂಧಿ ಹೇಳಿದ್ದೇನು..?
ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದಡಿ ರಾಹುಲ್ ಗಾಂಧಿ ವಿರುದ್ಧ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018ರಂದು ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಬಿಜೆಪಿಯು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದ ಆರೋಪಿಯಾಗಿರುವ ವ್ಯಕ್ತಿಯನ್ನು (ಅಮಿತ್ ಶಾ) ತಮ್ಮ ಪಕ್ಷದ ಅಧ್ಯಕ್ಷರನ್ನಾಗಿ ಕೂರಿಸಿದೆ ಎಂದು ರಾಹುಲ್ ಗಾಂಧಿಯ ಅಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ರಾಹುಲ್ ಬಿಜೆಪಿ ಪಕ್ಷದ ಪ್ರಮುಖ ನಾಯಕರೊಬ್ಬರಿಗೆ ಕೊಲೆಗಾರ ಎಂದು ಹೇಳಿರುವುದು ಸರಿಯಲ್ಲ ಎಂದು ಮಿಶ್ರಾ ನ್ಯಾಯಾಲಯಕ್ಕೆ ತಿಳಿಸಿದ್ದರು.