Sat. Nov 2nd, 2024

ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ನಾಮಪತ್ರ

Share this with Friends

ಲಕ್ನೋ,ಮೇ.3: ಕುತೂಹಲ ಮೂಡಿಸಿದ್ದ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿನಾಮಪತ್ರ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಅವರ ಪತಿ ರಾಬರ್ಟ್‌ ವಾದ್ರಾ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿದರು.

ಎರಡನೇ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿದ್ದರು. ಈ ಮೊದಲು ಕೇರಳದ ವಯನಾಡ್‌ನಿಂದ ಸ್ಪರ್ಧಿಸಿದ್ದರು.

ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳ ವಿಚಾರವಾಗಿ ಇಲ್ಲಿವರೆಗೆ ಇದ್ದ ಗೊಂದಲ ಹಾಗೂ ಕುತೂಹಲಕ್ಕೆ ತೆರೆ ಬಿದ್ದಿದೆ. ಅಮೇಥಿಯಿಂದ ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್‌ ನ‌ ಕಿಶೋರಿ ಲಾಲ್‌ ಶರ್ಮಾ ಅವರನ್ನು ಕಣಕ್ಕಿಳಿಸಿದೆ.

ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ರಾಯ್‌ಬರೇಲಿ ಕಾಂಗ್ರೆಸ್‌ಗೆ ಅತ್ಯಂತ ಸುರಕ್ಷಿತ ಕ್ಷೇತ್ರ. ಇದುವರೆಗೆ ಸಾಕ್ಷಿಯಾಗಿರುವ 20 ಚುನಾವಣೆಗಳಲ್ಲಿ ಕಾಂಗ್ರೆಸ್ 17 ಬಾರಿ ಗೆದ್ದಿದೆ.

ಕಳೆದ ಎರಡು ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸೋನಿಯಾ ಗಾಂಧಿ ಗೆದ್ದು ಪಾರ್ಲಿಮೆಂಟ್‌ ಪ್ರವೇಶಿಸಿದ್ದರು. 2014 ಮತ್ತು 2019 ರಲ್ಲಿ ಬಿಜೆಪಿ ಬೆಂಬಲದ ಅಲೆ ಇದ್ದರೂ ಈ ಸ್ಥಾನ ಕಾಂಗ್ರೆಸ್‌ನಲ್ಲೇ ಉಳಿದಿತ್ತು.

2019 ರ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ಈಗ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದಾರೆ.


Share this with Friends

Related Post