Tue. Dec 24th, 2024

ಮಂಗಳೂರು ಕಾರಾಗೃಹದ ಮೇಲೆ ದಾಳಿ: ಡ್ರಗ್ಸ್‌ ಮೊಬೈಲ್‌ ವಶ

Share this with Friends

ಮಂಗಳೂರು,ಜು.25: ಮಂಗಳೂರಿನ ಕೋಡಿಯಾಲ ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ಈ ವೇಳೆ ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮುಂಜಾನೆ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ.

ಈ ವೇಳೆ ಖೈದಿಗಳ ಬಳಿ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆದರು.

25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್, ಐದು ಇಯರ್ ಫೋನ್, ಒಂದು ಬ್ಲೂಟೂತ್ ಡಿವೈಸ್, ಒಂದು ಪೆನ್‌ಡ್ರೈವ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡ್ರಗ್, ಗಾಂಜಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ ವಾಲ್ ತನಿಖೆಗೆ ಆದೇಶ ನೀಡಿದ್ದಾರೆ.

ಅನುಪಮ್‌ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ,15 ಇನ್‌ಸ್ಪೆಕ್ಟರ್‌,150 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


Share this with Friends

Related Post