Sat. Nov 2nd, 2024

ರಾಮೇಶ್ವರ ಕಫೆ ಬಾಂಬ್ ಪ್ರಕರಣ:ಅಗತ್ಯ ಬಿದ್ದರೆ ಎನ್.ಐ.ಎ ತನಿಖೆ:ಸಿಎಂ

Share this with Friends

ಚಿಕ್ಕಮಗಳೂರು, ಮಾರ್ಚ್.3: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಿಕ್ಕ ಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ, ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ, ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ, ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು,
ಇದು ಎನ್.ಐ.ಎ, RAW ವೈಫಲ್ಯವಲ್ಲವೇ ಎಂದು ಪ್ರಶ್ನಿಸಿದರು.

ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟ ವಾಗಿತ್ತಲ್ಲಾ,ಆಗ ಬಿಜೆಪಿ ಅಧಿಕಾರದಲ್ಲಿತ್ತಲ್ಲವೆ ಎಂದು ಪ್ರಶ್ನಿಸಿದರು ಸಿಎಂ.

ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರ ಬಳಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದರು.


Share this with Friends

Related Post