Tue. Dec 24th, 2024

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಒಬ್ಬನನ್ನ ವಶಕ್ಕೆ ಪಡೆದ‌ ಎನ್ ಐ ಎ

Share this with Friends

ಬಳ್ಳಾರಿ,ಮಾ.13: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್‍ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಶಬ್ಬೀರ್‌ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆ ತಂದಿದ್ದಾರೆ.

ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಈತನಿಗೂ ಲಿಂಕ್ ಇರಬಹುದೆಂಬ ಅನುಮಾನದ ಮೇಲೆ ಶಬ್ಬೀರ್‌ ನನ್ನು ತನಿಖೆಗೆ ಒಳಪಡಿಸಲಾಗಿದೆ.

ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್‌ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್‍ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎಂಬ ಆರೋಪದ ಮೇಲೆ ಅಧಿಕಾರಿಗಳು ಶಬ್ಬೀರ್‌ ನನ್ನು ವಶಕ್ಕೆ ಪಡೆದಿದ್ದಾರೆ.

ಶಂಕಿತ ಉಗ್ರ ಹೈದರಾಬಾದ್‍ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮಾ.1ರಂದು ವೈಟ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು.


Share this with Friends

Related Post