Mon. Dec 23rd, 2024

ಅತ್ಯಾಚಾರ ಪ್ರಕರಣ: ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ

Share this with Friends

ಬೆಂಗಳೂರು,ಜೂ.24: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಮೂರನೇ ಕೇಸ್‌ ನಲ್ಲಿ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ಕೋರ್ಟ್ ಮುಂದೆ ಅವರನ್ನು ಹಾಜರು ಪಡಿಸಲಾಯಿತು.

ವಿಚಾರಣೆ ನಡೆಸಿದ 42ನೆ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು.

ಮೂರನೇ ಅತ್ಯಾಚಾರ ಪ್ರಕರಣದ ವಿಚಾರಣೆ ಇದಾಗಿದ್ದು, ಈ ಕೇಸ್‌ನಲ್ಲಿ ಎಸ್‍ಐಟಿ ಅಧಿಕಾರಿಗಳು 5 ದಿನಗಳ ಕಸ್ಟಡಿ ಮುಕ್ತಾಯ ಹಿನ್ನೆಲೆ ಇಂದು ಕೋರ್ಟ್ ಗೆ ಹಾಜರುಪಡಿಸಿದರು.

ವಿಶೇಷ ತನಿಖಾ ತಂಡ ಮತ್ತೆ ಕಸ್ಟಡಿಗೆ ಕೋರಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಪ್ರಕಟಿಸಿದರು.

ಈ ಪ್ರಕರಣದಲ್ಲಿ ಜುಲೈ 8ವರೆಗೆ ಪ್ರಜ್ವಲ್ ರೇವಣ್ಣ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿ


Share this with Friends

Related Post