Tue. Jan 7th, 2025

ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್

Share this with Friends

ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ನಡೆಯಿತು.

ಮೈಸೂರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಬಹಳಷ್ಟನ್ನು ಇತ್ಯರ್ಥಪಡಿಸಲಾಯಿತು.

ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿತ್ತು.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿದ್ದ ಒಟ್ಟು 1,19,788 ಪ್ರಕರಣಗಳಲ್ಲಿ 59,490 ಸಿವಿಲ್ ಪ್ರಕರಣಗಳು ಹಾಗೂ 60,298 ಕ್ರಿಮಿನಲ್ ಪ್ರಕರಣಗಳಿದ್ದು,ಈ ಪ್ರಕರಣಗಳಲ್ಲಿ 39,980 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳು.

ಅವುಗಳ ಪೈಕಿ 26,866 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 6,425 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಯಿತು.

ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬoಧಿಸಿದoತೆ ಒಟ್ಟು 41 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದಾರೆ.

ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟಾರೆಯಾಗಿ 6,425 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿವೆ.

ಎಲ್ಲಾ ಪ್ರಕರಣಗಳಿಗೆ ಸಂಬoಧಿಸಿದoತೆ ರಾಜಿ ಸಂಧಾನ ಮೂಲಕ ಒಟ್ಟು ರೂ.56,24,12,963 ಗಳು ಇತ್ಯರ್ಥವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿ.ಜಿ ತಿಳಿಸಿದ್ದಾರೆ.


Share this with Friends

Related Post