Mon. Dec 23rd, 2024

ಮೈಸೂರಿನಲ್ಲಿ ರೇವ್ ಪಾರ್ಟಿ:ಯುವತಿಯರು ಸೇರಿ ಹಲವರ ಬಂಧನ

Share this with Friends

ಮೈಸೂರು:‌ ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿದ್ದು ಇಲವಾಲ ಠಾಣೆ ಪೊಲೀಸರು ದಾಳಿ ನಡೆಸಿ
ಯುವತಿಯರು ಸೇರಿ 50ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಿದ್ದಾರೆ.

ಈ ವೇಳೆ 30ಕ್ಕೂ ಹೆಚ್ಚು ಕಾರುಗಳು ಹಾಗೂ
ಸಂಗೀತ ಉಪಕರಣಗಳನ್ನು
ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್.ಎಸ್.ಬ್ಯಾಕ್ ವಾಟರ್ ಬಳಿ ಇರುವ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವ್ಯಕ್ತಿಯೊಬ್ಬರು ಪ್ರಚಾರ ಮಾಡಿದ್ದರು, ಹಾಗಾಗಿ ಸುಮಾರು 25 ಕ್ಕೂ ಹೆಚ್ಚು ಜೋಡಿಗಳು ಪಾರ್ಟಿಗೆ ಹೆಸರು ನೊಂದಾಯಿಸಿ ಕೊಂಡಿದ್ದರು.

ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಅಬ್ಬರದ ಸಂಗೀತವೂ ನಡೆದಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.

ಯಾರೊ‌ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಎಸ್ಪಿ ವಿಷ್ಣುವರ್ಧನ್ ಅವರ ನೇತೃತ್ವದಲ್ಲಿ ಅಡಿಷನಲ್ ಎಸ್ಪಿ ನಾಗೇಶ್ ಹಾಗೂ ಡಿವೈಎಸ್ಪಿ ಕರೀಂ ರಾವತರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಬಂಧಿಸಲಾದ ಯುವಕ ಯುವತಿಯರನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ,
ಆದರೆ ಸ್ಥಳದಲ್ಲಿ ಯಾವುದೇ ಮಾದಕ ವಸ್ತು, ಗಾಂಜಾ ದೊರತಿಲ್ಲವೆಂದು ಎಸ್ ಪಿ ವಿಷ್ಣುವರ್ಧನ್ ಸ್ಪಷ್ಟಪಡಿಸಿದ್ದಾರೆ.


Share this with Friends

Related Post