ಬೆಂಗಳೂರು,ಮೇ23: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯಲ್ಲಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ.
73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿದೆ.
ಇದರಿಂದ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ತೆಲುಗು ಕಿರುತೆರೆ ನಟಿ ಹೇಮ(ಕೃಷ್ಣವೇಣಿ) ಪಾಲ್ಗೊಂಡಿರುವುದು ಬಯಲಾಗಿದೆ. ಯಾಕೆಂದರೆ ಈಕೆಯ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ತೆಗೆದುಕೊಂಡಿರುವುದು ದೃಢಪಟ್ಟಿದೆ.
ರೇವ್ ಪಾರ್ಟಿಯಲ್ಲಿ ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿದೆ. ಸದ್ಯ ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ವಾಸು ಎಂಬಾತನ ಬರ್ತಡೇ ಅಂಗವಾಗಿ ಸನ್ ಸೆಟ್ ಟು ಸನ್ ರೈಸ್ ವಿಕ್ಟರಿ ಎಂಬ ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಸೇರಿದ್ದರು.