Sat. Dec 28th, 2024

ಬಿಜೆಪಿ ಪ್ರತಿಭಟನೆಗೆ ರೇಖಾ ಶ್ರೀನಿವಾಸ್ ಖಂಡನೆ

Share this with Friends

ಮೈಸೂರು,ಜೂ.18: ಬಿಜೆಪಿಯವರು ಪ್ರತಿಭಟನೆ ಹೆಸರಿನಲ್ಲಿ ನಾಗರಿಕರಿಗೆ ತೊಂದರೆ ಕೊಡುತ್ತಿರುವುದು ಖಂಡನೀಯ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಹೇಳಿದ್ದಾರೆ.

ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಆದಾಗ ಬಿಜೆಪಿಯವರು ಮಾತನಾಡಲಿಲ್ಲ, ಈಗ ಕೇವಲ 3 ರೂಪಾಯಿ ಹೆಚ್ಚಿಸಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ನಾಗರಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಸಹಿಸಿಕೊಳ್ಳಲು ಆಗದೆ ಬಿಜೆಪಿ ಈ ರೀತಿ ಸಮಯ ಹಾಳು ಮಾಡುವ ತಂತ್ರಗಾರಿಕೆ ಮಾಡುತ್ತಿದೆ ಎಂದು ರೇಖಾ ಆರೋಪಿಸಿದ್ದಾರೆ.

ತೈಲಬೆಲೆ ಹೆಚ್ಚಳಕ್ಕೆ ಬಿಜೆಪಿಗರು ಇಲ್ಲಿ ಪ್ರತಿಭಟನೆ ಮಾಡುವುದಕ್ಕಿಂತ ದೆಹಲಿಯಲ್ಲಿ ಪ್ರತಿಭಟನೆ ಮಾಡಿ ಟ್ಯಾಕ್ಸ್ ದರ ಇಳಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದು ಹೇಳಿದ್ದಾರೆ.


Share this with Friends

Related Post