ಬೆಂಗಳೂರು: ಭೋಪಾಲ್ ಜಂಕ್ಷನ್ ಮತ್ತು ವೀರಾಂಗಣ ಲಕ್ಷ್ಮೀಬಾಯಿ ಝಾನ್ಸಿ ಜಂಕ್ಷನ್ ನಡುವೆ ಇರುವ ವಿದಿಶಾ ನಿಲ್ದಾಣದಲ್ಲಿ, ರೈಲು ಸಂಖ್ಯೆ 12629/12630 ಯಶವಂತಪುರ – ಹಜರತ್ ನಿಜಾಮುದ್ದೀನ್ – ಯಶವಂತಪುರ ಸಂಪರ್ಕ ಕ್ರಾಂತಿ ದ್ವಿ-ಸಾಪ್ತಾಹಿಕ ಸೂಪರ್’ಫಾಸ್ಟ್ ಎಕ್ಸ್ ಪ್ರೆಸ್ ರೈಲಿಗೆ ಪ್ರಾಯೋಗಿಕ ನಿಲುಗಡೆ ನೀಡಲು ಪಶ್ಚಿಮ ಮಧ್ಯ ರೈಲ್ವೆ ನಿರ್ಧರಿಸಿದೆ.
ರೈಲು ಸಂಖ್ಯೆ 12629 (ಯಶವಂತಪುರ–ಹಜರತ್ ನಿಜಾಮುದ್ದೀನ್): ಈ ರೈಲು 2026ರ ಜನವರಿ 1ರಿಂದ ಜೂನ್ 30ರವರೆಗೆ ವಿದಿಶಾ ನಿಲ್ದಾಣಕ್ಕೆ ಮಧ್ಯರಾತ್ರಿ 12:45ಕ್ಕೆ ಆಗಮಿಸಿ, 12:47ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 12630 (ಹಜರತ್ ನಿಜಾಮುದ್ದೀನ್–ಯಶವಂತಪುರ): ಈ ರೈಲು 2025ರ ಡಿಸೆಂಬರ್ 31ರಿಂದ 2026ರ ಜೂನ್ 30ರವರೆಗೆ ಸಂಜೆ 5:28ಕ್ಕೆ ವಿದಿಶಾ ನಿಲ್ದಾಣಕ್ಕೆ ಆಗಮಿಸಿ, 5:30ಕ್ಕೆ ಪ್ರಯಾಣ ಮುಂದುವರಿಸಲಿದೆ.
ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ:
ಕಡಿಮೆ ಪ್ರಯಾಣಿಕರ ಸಂಖ್ಯೆಯ ಕಾರಣದಿಂದಾಗಿ, ರೈಲು ಸಂಖ್ಯೆ 17347/17348 ಎಸ್ಎಸ್ಎಸ್ ಹುಬ್ಬಳ್ಳಿ – ಚಿತ್ರದುರ್ಗ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಕಾಯ್ದಿರಿಸದ ಎಕ್ಸ್’ಪ್ರೆಸ್ ರೈಲುಗಳ ಚಿಕ್ಕಜಾಜೂರು ಮತ್ತು ಚಿತ್ರದುರ್ಗ ನಡುವಿನ ಭಾಗಶಃ ರದ್ದತಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಮೊದಲು 31.12.2025ರವರೆಗೆ ಸೂಚಿಸಲಾಗಿದ್ದ ಈ ಭಾಗಶಃ ರದ್ದತಿಯು, ಈಗ 01.01.2026 ರಿಂದ 31.03.2026ರವರೆಗೆ ಜಾರಿಯಲ್ಲಿರುತ್ತದೆ.
ಅದರಂತೆ, ರೈಲು ಸಂಖ್ಯೆ 17347 ಎಸ್ಎಸ್ಎಸ್ ಹುಬ್ಬಳ್ಳಿ – ಚಿತ್ರದುರ್ಗ ದೈನಂದಿನ ಕಾಯ್ದಿರಿಸದ ಎಕ್ಸ್’ಪ್ರೆಸ್ ರೈಲು ಚಿತ್ರದುರ್ಗದ ಬದಲಿಗೆ ಚಿಕ್ಕಜಾಜೂರಿನಲ್ಲಿ ತನ್ನ ಸೇವೆಯನ್ನು ಕೊನೆಗೊಳಿಸಲಿದೆ. ಮತ್ತು ರೈಲು ಸಂಖ್ಯೆ 17348 ಚಿತ್ರದುರ್ಗ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಕಾಯ್ದಿರಿಸದ ಎಕ್ಸ್’ಪ್ರೆಸ್ ರೈಲು ಚಿತ್ರದುರ್ಗದ ಬದಲಿಗೆ ಚಿಕ್ಕಜಾಜೂರಿನಿಂದಲೇ ಹೊರಡಲಿದೆ. ಈ ಅವಧಿಯಲ್ಲಿ ಚಿತ್ರದುರ್ಗ ಮತ್ತು ಚಿಕ್ಕಜಾಜೂರು ನಡುವಿನ ರೈಲು ಸೇವೆಗಳು ಸಂಪೂರ್ಣವಾಗಿ ರದ್ದುಗೊಂಡಿರುತ್ತವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

