Mon. Jan 6th, 2025

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

Share this with Friends

ಬೆಂಗಳೂರು, ಏ.14: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಮುಂಜಾನೆ ಸೌಂದರ್ಯ ಜಗದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಿಗ್ಗೆ ಕೊಠಡಿ ಬಾಗಿಲು ಬಹಳ ಹೊತ್ತಾದರೂ ತೆರೆಯದ ಕಾರಣ ಕುಟುಂಬದವರು ಬಾಗಿಲು ಒಡೆದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಸಂದರ್ಯ ಜಗದೀಶ್ ಕಂಡು ಶಾಕ್ ಆಗಿದ್ದಾರೆ.

ತಕ್ಷಣ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ಕರೆತಂದರು.ವೈದ್ಯರು ಪರಿಶೀಲಿಸಿ ಈಗಾಗಲೇ‌ ಸೌಂದರ್ಯ ಜಗದೀಶ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆದರೆ ಆದರೆ ಸೌಂದರ್ಯ ಜಗದೀಶ್ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನು ಗೊತ್ತಾಗಿಲ್ಲ ಪೊಲೀಸರು ತನಿಖೆ ನಡೆಸುತ್ತಿದ್ದು ಮನೆಯವರನ್ನು ಈ ಕುರಿತು ವಿಚಾರಿಸಿದ್ದಾರೆ.

ಸೌಂದರ್ಯ ಜಗದೀಶ್ ಅವರು ಸ್ನೇಹಿತರು, ಅಪ್ಪು ಪಪ್ಪು, ರಾಮಲೀಲಾ ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿದ್ದರು.


Share this with Friends

Related Post