Thu. Mar 5th, 2026

ವೈಜ್ಞಾನಿಕ ವಿಧಾನದಲ್ಲಿ ಕೃಷಿ, ಬೆಳೆಗಳ ಮೌಲ್ಯವರ್ತನೆ: ಸಿಎಂ ಕರೆ

Share this with Friends

ಮಂಡ್ಯ:ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ ಹಾಗಾಗಿ ಸರ್ಕಾರದ ಸಲವತ್ತುಗಳನ್ನು ಬಳಸಿಕೊಂಡು ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದರೆ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಿ ಆರ್ಥಿಕ ಸಬಲತೆ ಹೊಂದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ ರೈತರು ಆಧುನಿಕ ಯಂತ್ರೋಪಕರಣಗಳನ್ನು ಬೆಳೆಸಿ ಕೃಷಿ ಮಾಡಬೇಕು ಇದರಿಂದ ಸಮಯ ಮತ್ತು ಹಣ ಎರಡು ಉಳಿತಾಯವಾಗುತ್ತದೆ. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ:

ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ. ಎಂದರು.

ಎಲ್ಲ ಜಾತಿ ಧರ್ಮಗಳಲ್ಲೂ ಬಡವರು ಹಾಗೂ ಕೃಷಿಕರು ಇದ್ದಾರೆ ಎಲ್ಲರಲ್ಲೂ ಸಮಾನತೆ ಬರಬೇಕು. ಡಾ. ಬಿ.ಆರ್ ಅಂಬೇಡ್ಕರ್ ಅವರು ಹೇಳಿದಂತೆ ಎಲ್ಲಾ ಸಮಾಜದಲ್ಲೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಅಸಮಾನತೆಯನ್ನು ಓಡಿಸಬಹುದು. ಸಮಾಜದಲ್ಲಿ ಅನ್ಯಾಯ ಕೊಳಗಾದ ಶೋಷಿತ ಸಮುದಾಯಗಳ ಮಹಿಳೆಯರ, ದೀನ ದುರ್ಬಲರನ್ನು ಸರಿದೂಗಿಸಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆ, ಮೈ ಶುಗರ್ ಅನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ಹಣವನ್ನು ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿದೆ. ಮೈ ಶುಗರ್ ಕಾರ್ ಕಾರ್ಖಾನೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು ಎಂದರು.

ನಮ್ಮ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಮಂಡ್ಯ ಜಿಲ್ಲೆಯ 18 ಕೋಟಿ ಜನ ಮಹಿಳೆಯರು ಶಕ್ತಿ ಯೋಜನೆ ಅಡಿ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ  ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ  ಕಬ್ಬಿನ ಗುಣಮಟ್ಟ ಹೆಚ್ಚಿಸಿ ಎಂದು ಹೇಳಿದರು.


Share this with Friends

Related Post