Mon. Dec 23rd, 2024

ಶೂಟಿಂಗ್ ನಲ್ಲಿ ಮೈಸೂರಿನ ಚೈತ್ರಾಗೆ ದ್ವಿತೀಯ ಸ್ಥಾನ

Share this with Friends

ಮೈಸೂರು: ಶೂಟಿಂಗ್ ಸ್ಪರ್ಧೆಯಲ್ಲಿ ಮೈಸೂರಿನ ಎಂ. ಎಲ್ ಚೈತ್ರ‌ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.

ಮೈಸೂರಿನ ಎಂ. ಕೆ. ಲಿಂಗರಾಜು- ಎಸ್. ಜಿ. ಕುಸುಮ ಅವರ ಪುತ್ರಿ ಎಂ. ಎಲ್. ಚೈತ್ರ ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಈ ಸಾಧನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ರಾಜ್ಯ ರೈಫಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಚೈತ್ರ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಚೆನ್ನೈನಲ್ಲಿ ನಡೆದ ದಕ್ಷಿಣ ವಲಯದ ರಾಷ್ಟ್ರಮಟ್ಟದ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅಖಿಲ ಭಾರತ ರೈಫಲ್ ಅಸೋಸಿಯೇಷನ್ ಆಯೋಜಿಸಿದ್ದ ಆರು ರಾಜ್ಯಗಳ ನಡುವಿನ ಸ್ಪರ್ಧೆಯಲ್ಲಿ ಚೈತ್ರ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಸೀನಿಯರ್ ವಿಭಾಗದಲ್ಲಿ ನಾಲ್ಕನೆ ಸ್ಥಾನ ಗಳಿಸಿದ್ದಾರೆ.

ಇದಲ್ಲದೆ ದಕ್ಷಿಣ ವಲಯದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚೈತ್ರ ಪ್ರಥಮ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿನ ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಎರಡನೇ ಸ್ಥಾನವನ್ನು ಗಳಿಸಿದ್ದಾರೆ.


Share this with Friends

Related Post