Sat. Nov 2nd, 2024

ಮೈಸೂರು ಅಭಿವೃದ್ಧಿಗೆ ಸಿದ್ದು, ಪ್ರತಾಪ್ ರ ಸಹಕಾರ ಕೇಳುವೆ: ಯದುವೀರ್

Share this with Friends

ಮೈಸೂರು,ಜೂ.13: ಮೈಸೂರು ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ ಅದಕ್ಕಾಗಿ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಅವರ ಸಹಕಾರ ಕೇಳುತ್ತೇನೆ ಎಂದು ಸಂಸದ
ಯದುವೀರ್ ಒಡೆಯರ್ ತಿಳಿಸಿದರು.

ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಮೈಸೂರು ಕೊಡಗು ಕ್ಷೇತ್ರದಲ್ಲಿ 14‌ ಲಕ್ಷ ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಲಿಕ್ಕೆ ಜನತೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ರಾಜ್ಯದ ಐದು ಮಂದಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದೆ. ಇದರಿಂದ ಅಭಿವೃದ್ಧಿಗೆ ಸಹಕಾರ ಆಗುತ್ತದೆ. ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಬರಲು ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಮೈಸೂರು ಪ್ರವಾಸಿ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಮೈಸೂರು ಪಾರಂಪರಿಕ ಕಟ್ಟಡಗಳ ನಗರವಾಗಿದೆ.

ಹಾಗಾಗಿ ದೇವರಾಜ, ಲ್ಯಾನ್ಸ್ ಡೌನ್ ಕಟ್ಟಡಗಳನ್ನ ನೆಲಸಮ ಮಾಡುವ ಅವಶ್ಯಕತೆ ಇಲ್ಲ, ಹಾಗೆಯೇ ಅದನ್ನ ಸಂರಕ್ಷಣೆ ಮಾಡುತ್ತೇವೆ. ಮೈಸೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೈಗಾರಿಕೆಗಳನ್ನೂ ಅಭಿವೃದ್ಧಿ ಮಾಡುತ್ತೇವೆ ಎಂದು ಯದುವೀರ್ ಭರವಸೆ ನೀಡಿದರು.

ಈಗಾಗಲೇ ಕುವೆಂಪುನಗರದಲ್ಲಿ ನನ್ನ ಕಚೇರಿ ತೆರೆಯಲಾಗಿದೆ, ಸಾರ್ವಜನಿಕರು ನನ್ನ ಅಧಿಕೃತ ಕಚೇರಿಯಲ್ಲಿ ನನ್ನನ್ನು ಭೇಟಿ ಮಾಡಬಹುದು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಗ್ಯಾರಂಟಿ ಯೋಜನೆಗಳಿಂದಲೇ ಅವರು ಅಧಿಕಾರಕ್ಕೆ ಬಂದಿದ್ದಾರೆ,ಹಾಗಾಗಿ ಗ್ಯಾರಂಟಿ ಯೋಜನೆ ಮುಂದುವರೆಸುವುದು ಸೂಕ್ತ,ಆದರೆ ಮುಂದುವರೆಸುವುದೊ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು ಯದುವೀರ್


Share this with Friends

Related Post