Mon. Jan 6th, 2025

ಲೈಂಗಿಕ ಕಿರುಕುಳ ಪ್ರಕರಣ: ಅಗತ್ಯಬಿದ್ದರೆ ಬಿಎಸ್ ವೈ ಬಂಧನ- ಪರಮೇಶ್ವರ್

Share this with Friends

ತುಮಕೂರು,ಜೂ.13: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಅಗತ್ಯಬಿದ್ದರೆ ಸಿಐಡಿಯವರು ಬಂಧಿಸಲಿದ್ದಾರೆ‌ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ,ಬಿ ಎಸ್ ವೈ ಬಂದು ನೊಟೀಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದಿದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗುವುದಿಲ್ಲ ಎಂದು ತಿಳಿಸಿದರು.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು

ಅದರ ಬೆನ್ನಲ್ಲೇ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್​ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.


Share this with Friends

Related Post