Fri. Nov 1st, 2024

ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಶಿಲ್ಪಾ ನಾಗ್ ಸೂಚನೆ

Share this with Friends

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಿರ್ವಹಣೆ ಕುರಿತು ಸಹಾಯಕ ಚುನವಣಾಧಿಕಾರಿಗಳು, ನಿಯೋಜಿತ ನೋಡೆಲ್ ಅಧಿಕಾರಿಗಳೊಂದಿಗೆ ನಡೆದ ವರ್ಚುವೆಲ್ ಸಭೆಯಲ್ಲಿ ಅವರು ಮಾತನಾಡಿದರು.

ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ, ನಂಜನಗೂಡು, ವರುಣ, ಟಿ. ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಅಂತರರಾಜ್ಯ ಹಾಗೂ ಅಂತರಜಿಲ್ಲಾ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಕಾರ್ಯವನ್ನು ಚುರುಕುಗೊಳಿಸಬೇಕು.

ದಾಖಲೆ ಇಲ್ಲದೇ ಸಾಗಿಸುವ ಹಣ, ಅಕ್ರಮ ಮದ್ಯ ಸಾಗಣೆ, ಅಮಿಷ ಒಡ್ಡುವ ವಸ್ತುಗಳ ಮೇಲೆ ಹೆಚ್ಚಿನ ನಿಗಾ ಇರಬೇಕು ಎಲ್ಲಾ ವಾಹನಗಳನ್ನು ವ್ಯಾಪಕವಾಗಿ ತಪಾಸಣೆ ಮಾಡಬೇಕು ಎಂದು ಆದೇಶಿಸಿದರು.

ಚೆಕ್‍ಪೋಸ್ಟ್‍ಗಳಲ್ಲಿ ಮೂಲಸೌಕರ್ಯಗಳ ವ್ಯವಸ್ಥೆ ಇರಬೇಕು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಜರ್ಕಿನ್, ಟಾರ್ಚ್‍ಗಳು ಇರಬೇಕು. ಎಲ್ಲಾ ಚೆಕ್‍ಪೋಸ್ಟ್‍ಗಳಲ್ಲಿ ಸಿ.ಸಿ. ಟಿ.ವಿ ಕಾರ್ಯನಿರ್ವಹಿಸಬೇಕು. ವಿದ್ಯುತ್ ಅಡಚಣೆಯಾಗದಿರಲು ಯು.ಪಿ.ಎಸ್ ವ್ಯವಸ್ಥೆ ಇರಬೇಕು ಎಂದು ನಿರ್ದೇಶನ ನೀಡಿದರು.

ಚೆಕ್‍ಪೋಸ್ಟ್‍ಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಬ್ಬಂದಿಗಳು ವಾಹನಗಳನ್ನು ಕೂಲಂಕುಷವಾಗಿ ವಾಹನ ತಪಾಸಣೆ ಮಾಡಬೇಕು, ಚುನಾವಣಾ ಕೆಲಸಗಳಿಗಾಗಿ ನಿಯೋಜಿತರಾಗಿರುವ ಎ.ಆರ್.ಒ ಮತ್ತು ತಹಶೀಲ್ದಾರರು ಭೇಟಿ ನೀಡಿ ಚೆಕ್ ಪೋಸ್ಟ್ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು ಎಂದು ಶಿಲ್ಪ ನಾಗ್ ಸಲಹೆ ನೀಡಿದರು.

ಮಾದರಿ ನೀತಿ ಸಂಹಿತೆ ಪಾಲನೆಗೆ ನಿಗಾ ವಹಿಸಲು ನಿಯೋಜಿತರಾಗಿರುವ ಫೈಯಿಂಗ್ ಸ್ಕ್ವಾಡ್ ತಂಡ, ವಿಡಿಯೋ ಸರ್ವೇಲೆನ್ಸ್ ಘಟಕ, ವಿಡಿಯೋ ವೀವಿಂಗ್ ತಂಡಗಳು ಹೆಚ್ಚು ಚಟುವಟಿಕೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Share this with Friends

Related Post