Tue. Jun 23rd, 2026

“ಮಂಗಳೂರು ದೂರ, ಬೆಂಗಳೂರು ಹತ್ತಿರ”; ಶಿವಮೊಗ್ಗದ ದಾವೆದಾರರ ಕಳವಳಕ್ಕೆ ಧ್ವನಿಯಾದ ಸಂಸದ; ರಾಜಭವನದಲ್ಲಿ ಮಹತ್ವದ ಚರ್ಚೆ!

Share this with Friends

ಶಿವಮೊಗ್ಗ: ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಜನರ ದಶಕಗಳ ಬೇಡಿಕೆಯಾಗಿರುವ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯ ಹೋರಾಟಕ್ಕೆ ಈಗ ಮತ್ತಷ್ಟು ರಾಜಕೀಯ ಬಲ ಬಂದಿದೆ. ಈ ಸಂಬಂಧ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಅಧಿಕೃತ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಪ್ರವೃತ್ತವಾಗುವಂತೆ ಸೂಕ್ತ ನಿರ್ದೇಶನ ಹಾಗೂ ತುರ್ತು ಸಲಹೆಗಳನ್ನು ನೀಡಬೇಕು ಎಂದು ಸಂಸದರು ರಾಜ್ಯಪಾಲರನ್ನು ಕೋರಿದ್ದಾರೆ. ಭೇಟಿಯ ಸಂದರ್ಭದಲ್ಲಿ ಶಿವಮೊಗ್ಗದ ಭೌಗೋಲಿಕ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಟ್ಟ ಅವರು, ಜಿಲ್ಲೆಯು ಮಧ್ಯ ಕರ್ನಾಟಕದ ಪ್ರಮುಖ ಆಡಳಿತಾತ್ಮಕ, ಶೈಕ್ಷಣಿಕ, ವಾಣಿಜ್ಯ ಮತ್ತು ಸಾರಿಗೆ ಕೇಂದ್ರವಾಗಿ ವೇಗವಾಗಿ ಹೊರಹೊಮ್ಮುತ್ತಿರುವುದನ್ನು ರಾಜ್ಯಪಾಲರ ಗಮನಕ್ಕೆ ತಂದರು.

ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ:

ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವುದರಿಂದ ಕೇವಲ ಶಿವಮೊಗ್ಗ ಜಿಲ್ಲೆಯಷ್ಟೇ ಅಲ್ಲದೆ ನೆರೆಯ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಸಾರ್ವಜನಿಕರಿಗೆ ಹಾಗೂ ಕಾನೂನು ವಲಯಕ್ಕೆ ಭಾರಿ ಅನುಕೂಲವಾಗಲಿದೆ ಎಂದು ರಾಘವೇಂದ್ರ ಪ್ರತಿಪಾದಿಸಿದರು. ಪ್ರಸ್ತುತ ಈ ಭಾಗದ ಜನರು ಸಣ್ಣಪುಟ್ಟ ಹೈಕೋರ್ಟ್ ಕೆಲಸಗಳಿಗೂ ಬೆಂಗಳೂರಿಗೆ ಅಲೆಯಬೇಕಾಗಿದ್ದು, ಪೀಠ ಸ್ಥಾಪನೆಯಿಂದ ನ್ಯಾಯ ಪ್ರಕ್ರಿಯೆಯು ಜನರಿಗೆ ಅತ್ಯಂತ ಸುಲಭ, ಅಗ್ಗ ಮತ್ತು ಪರಿಣಾಮಕಾರಿಯಾಗಿ ಸಿಗಲಿದೆ ಎಂದು ಅವರು ಒತ್ತಿ ಹೇಳಿದರು.

ಬೆಂಗಳೂರು ಪ್ರಧಾನ ಪೀಠದ ವ್ಯಾಪ್ತಿಯಲ್ಲೇ ಇರಲು ಆಗ್ರಹ:

ಇದೇ ಸಂದರ್ಭದಲ್ಲಿ ಹೊಸದೊಂದು ಪ್ರಮುಖ ವಿಷಯವನ್ನು ಪ್ರಸ್ತಾಪಿಸಿದ ಸಂಸದರು, ಶಿವಮೊಗ್ಗದಲ್ಲಿ ಪ್ರತ್ಯೇಕ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವವರೆಗೆ ಜಿಲ್ಲೆಯು ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠದ ವ್ಯಾಪ್ತಿಯಲ್ಲಿಯೇ ಮುಂದುವರಿಯಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗವನ್ನು ಮಂಗಳೂರಿನಲ್ಲಿ ಪ್ರಸ್ತಾಪಿಸಲಾಗಿರುವ ನ್ಯಾಯಪೀಠದ ವ್ಯಾಪ್ತಿಗೆ ಸೇರಿಸುವ ಆಲೋಚನೆಗೆ ಸ್ಥಳೀಯ ವಕೀಲರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕಳವಳವನ್ನು ರಾಜ್ಯಪಾಲರ ಗಮನಕ್ಕೆ ತಂದ ರಾಘವೇಂದ್ರ ಅವರು, ಭೌಗೋಲಿಕ ಹಾಗೂ ಸಾರಿಗೆ ದೃಷ್ಟಿಯಿಂದ ಶಿವಮೊಗ್ಗದ ಜನರಿಗೆ ಮಂಗಳೂರಿಗಿಂತ ಬೆಂಗಳೂರೇ ಹೆಚ್ಚು ಸುಲಭವಾಗಿ ತಲುಪಬಹುದಾದ ಕೇಂದ್ರವಾಗಿದೆ ಎಂದು ಸ್ಪಷ್ಟಪಡಿಸಿದರು. ಮಂಗಳೂರು ಪೀಠಕ್ಕೆ ಜಿಲ್ಲೆಯನ್ನು ಜೋಡಿಸುವುದರಿಂದ ಮಲೆನಾಡು ಭಾಗದ ದಾವೆದಾರರಿಗೆ ಭಾರಿ ಅನನುಕೂಲವಾಗಲಿದೆ ಎಂದು ಅವರು ವಿವರಿಸಿದರು.

ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ:

ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವುದರಿಂದ ಕೇವಲ ಶಿವಮೊಗ್ಗ ಜಿಲ್ಲೆಯಷ್ಟೇ ಅಲ್ಲದೆ ನೆರೆಯ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಸಾರ್ವಜನಿಕರಿಗೆ ಹಾಗೂ ಕಾನೂನು ವಲಯಕ್ಕೆ ಭಾರಿ ಅನುಕೂಲವಾಗಲಿದೆ ಎಂದು ರಾಘವೇಂದ್ರ ಪ್ರತಿಪಾದಿಸಿದರು. ಪ್ರಸ್ತುತ ಈ ಭಾಗದ ಜನರು ಹೈಕೋರ್ಟ್ ಕೆಲಸಗಳಿಗೂ ಬೆಂಗಳೂರಿಗೆ ಅಲೆಯಬೇಕಾಗಿದ್ದು, ಪೀಠ ಸ್ಥಾಪನೆಯಿಂದ ನ್ಯಾಯ ಪ್ರಕ್ರಿಯೆಯು ಜನರಿಗೆ ಅತ್ಯಂತ ಸುಲಭ, ಅಗ್ಗ ಮತ್ತು ಪರಿಣಾಮಕಾರಿಯಾಗಿ ಸಿಗಲಿದೆ ಎಂದು ಅವರು ಒತ್ತಿ ಹೇಳಿದರು. “ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠದ ಸ್ಥಾಪನೆಯು ಆ ಭಾಗದ ಜನರ ನ್ಯಾಯಪ್ರಾಪ್ತಿಯ ಹಕ್ಕಿಗೆ ಗಮನಾರ್ಹ ಬಲ ನೀಡುತ್ತದೆ, ದಾವೆದಾರರ ವೆಚ್ಚದ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಜನರ ದೀರ್ಘಕಾಲದ ಆಕಾಂಕ್ಷೆಯನ್ನು ಈಡೇರಿಸುತ್ತದೆ” ಎಂದು ಅವರು ಹೇಳಿದರು.

ವಕೀಲರ ಸಂಘದ ಬೆಂಬಲ:

ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದು, ಸಂಸದರ ಈ ಬೇಡಿಕೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವ ಸ್ಥಳೀಯ ವಕೀಲರ ಸಂಘಗಳು, ಕಾನೂನು ತಜ್ಞರು ಮತ್ತು ನಾಗರಿಕ ಸಮಾಜದ ಸಂಘಟನೆಗಳ ದೀರ್ಘಕಾಲದ ಹಕ್ಕೊತ್ತಾಯಕ್ಕೆ ಸಂಸದರ ಈ ಹೆಜ್ಜೆಯು ಹೊಸ ಭರವಸೆ ಮೂಡಿಸಿದೆ.

 

 


Share this with Friends

Related Post