ಶಿವಮೊಗ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಒಟ್ಟು ಹುದ್ದೆಗಳು : 14
ವಿದ್ಯಾರ್ಹತೆ: ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ, ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ: ಮಾಸಿಕ ರೂ. 15196.72 ರಂತೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.
ಅರ್ಜಿ ಸಲಿಸಲು ಕೊನೆಯ ದಿನಾಂಕ – 23 ಫೆಬ್ರುವರಿ 2024
ಹೆಚ್ಚಿನ ಮಾಹಿತಿಗಾಗಿ : https://shimoga.nic.in/
ಅಧಿಸೂಚನೆ : http://tinyurl.com/Gram-Panchayat-Recruitment