Mon. Dec 23rd, 2024

ಸದಾನಂದ ಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ

Shobha Karandlaje
Share this with Friends

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಂಸದ ಡಿ.ವಿ. ಸದಾನಂದ ಗೌಡ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಘೋಷಣೆ ಬೆನ್ನಲ್ಲೇ ಸದಾನಂದ ಗೌಡರ ಮನೆಗೆ ಭೇಟಿ ನೀಡಿದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಈ ಬಗ್ಗೆ ಪ್ರಿಕ್ರಿಯಿಸಿರುವ ಅವರು, ಪಕ್ಷದ ಹಿರಿಯ ಮುಖಂಡರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಡಿ.ವಿ. ಸದಾನಂದ ಗೌಡ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ. ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಿ, ಸಂಪೂರ್ಣ ಸಹಕಾರ ಕೋರಿದೆ ಎಂದು ಹೇಳಿದ್ದಾರೆ.

ಟಿಕೆಟ್ ಪ್ರಕಟ ಬಳಿಕ ಮಾಜಿ ಸಿಎಂ ಡಾ.ಬಿ.ಎಸ್. ಯಡಿಯೂರಪ್ಪ ಅವರನ್ನು ಶೋಭಾ ಕರಂದ್ಲಾಜೆ ಭೇಟಿ ಮಾಡಿದರು. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿ ಆಶೀರ್ವಾದ ಪಡೆದು, ಧನ್ಯವಾದ ತಿಳಿಸಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರ ಹೆಸರು ಘೋಷಿಸಲಾಗಿದೆ. ಸದ್ಯ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.


Share this with Friends

Related Post