Tue. Dec 24th, 2024

ಶೋಭಾ ಕರಂದ್ಲಾಜೆಯನ್ನ ಉತ್ತರ ಕ್ಷೇತ್ರದಿಂದಲೂ ವಾಪಾಸ್ ಕಳಿಸಿ: ಸಿಎಂ ಕರೆ

Share this with Friends

ಬೆಂಗಳೂರು, ಏ. 7: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.

ಪ್ರೊ.ರಾಜೀವ್ ಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆಲ್ಲುವ ಅವಕಾಶಗಳಿವೆ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ‌ ಮಹಿಳಾ ಸಮಾವೇಶ ಮತ್ತು ಬೂತ್ ಮುಖಂಡರುಗಳ ಸಭೆಯನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ, ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ವಾಪಾಸ್ ಕಳಿಸಿ ಎಂದು ಕರೆ ನೀಡಿದರು.

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ಸಂಸತ್ ನಲ್ಲಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ದ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ ಎಂದು ಸಿಎಂ ಪ್ರಶ್ನಿಸಿದರು.

ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳುವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೆಗಾ ಎಂದು ಭಾಷಣ ಮಾಡಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದು ಟೀಕಿಸಿದರು.

ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ.ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದು ವ್ಯಂಗ್ಯವಾಡಿದರು.

ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮತ್ತು 400 ಕ್ಕೂ ಅಧಿಕ ಮಂದಿ ಬೂತ್ ಮಟ್ಟದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.


Share this with Friends

Related Post