ಮೈಸೂರು: ಮೈಸೂರು ತಾಲೂಕು ಮೀನಾಕ್ಷಿಪುರದ ಖಾಸಗಿ ಜಮೀನಿನಲ್ಲಿ ರೇವ್ ಪಾರ್ಟಿ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.
ರೇವ್ ಪಾರ್ಟಿ ನಡೆಸಿದವರ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವುದಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತು ಇಲವಾಲ ಪಿಎಸ್ಐ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗವನ್ನು ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದಿಸಿದ್ದಾರೆ.
ಉದ್ಯಮಿಗಳ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಈ ರೀತಿಯ ಬೆಳವಣಿಗೆ ನಡೆದಿರುವುದು ಸರಿಯಲ್ಲ ಎಂದು ಬೇಸರ ಪಟ್ಟಿದ್ದಾರೆ.
ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಯಾವುದೇ ಒತ್ತಡಕ್ಕೂ ಮಣಿಯದೆ ಜಮೀನಿನ ಮಾಲೀಕ, ಪಾರ್ಟಿ ಆಯೋಜಕರು ಮತ್ತು ಭಾಗವಹಿಸಿದ್ದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಕೋರಿದ್ದಾರೆ.