Mon. Dec 23rd, 2024

ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

Share this with Friends

ಮೈಸೂರು,ಮೇ ಮೇ.13: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

ನಗರದ ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುದರ್ಶನ್ ಅವರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ನಂತರ ಪುಷ್ಪ‌ ನಮನ ಸಲ್ಲಿಸಿ, ನಮಿಸಿದರು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.


Share this with Friends

Related Post