Mon. Dec 23rd, 2024

ಸಿದ್ದರಾಮಯ್ಯ ಬಂಧಿಸಿ ವಿಚಾರಣೆಗೊಳಪಡಿಸಿ: ಸ್ನೇಹಮಯಿ ಕೃಷ್ಣ

Share this with Friends

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಸಲ್ಲಿಸಿದ್ದಾರೆ.

ಸೋಮವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸ್ನೇಹಮಹಿ ಕೃಷ್ಣ ಲೋಕಾಯುಕ್ತಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಾಕ್ಷಿ ನಾಶ ಮಾಡುತ್ತಿದ್ದಾರೆ, ಭಾಷಣದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ. ಸುಳ್ಳು ಜಾಹೀರಾತು ನೀಡುತ್ತಿದ್ದಾರೆ ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ
ಎಂದು ಆಗ್ರಹಿಸಿದರು.

ಲೋಕಾಯುಕ್ತ ಕಚೇರಿಗೆ ಕೂಡಲೆ ಸಿಸಿಟಿವಿ ಅಳವಡಿಸಬೇಕು ಎಂದು ಅವರು ಇದೇ ವೇಳೆ ಸ್ನೇಹಮಯಿ ಕೃಷ್ಣ ಆಗ್ರಹಿಸಿದರು.


Share this with Friends

Related Post