ಬೆಂಗಳೂರು, ಮಾ.2: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟದಿಂದ ಗಾಯಗೊಂಡಿರುವವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು.
ಇಂದು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ನಂತರ ಸಿಎಂ ಬೆಂಗಳೂರಿಗೆ ತೆರಳಿ ತಕ್ಷಣ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದರು.
ಬಾಂಬ್ ಸ್ಪೋಟದಲ್ಲಿ ಒಂಬತ್ತು ಂಮದಿ ಗಾಯಗೊಂಡಿದ್ದು ಸಿದ್ದರಾಮಯ್ಯ ಪ್ರತಿಯೊಬ್ಬರ ಬಳಿಯೂ ತೆರಳಿ ಆರೋಗ್ಯ ವಾಚಾರಿಸಿದರು.
ಭಯ ಪಡಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಸ್ಪೋಟಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ತಿಳಿಸಿದರು.
ನಂತರ ವೈದ್ಯರಿಂದ ಗಾಯಾಳುಗಳ ಸ್ಥಿತಿ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಸೂಕ್ತ ಚಿಕಿತ್ಸೆ ಕೊಡುವಂತೆ ಸೂಚಿಸಿದರು.