Mon. Dec 23rd, 2024

ಸಿದ್ದರಾಯ್ಯನವರಿಗೆ ಸ್ವಕ್ಷೇತ್ರದ ಜನರ ತಿರಸ್ಕಾರದ ಭಯ ಕಾಡುತ್ತಿದೆ:ಅಶೋಕ್

Share this with Friends

ಬೆಂಗಳೂರು, ಏ.2: 2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ ನವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಗ್ಯಾರೆಂಟಿಗಳು ಜನರಿಗೆ ತೃಪ್ತಿ ತಂದಿಲ್ಲ, ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರೆಂಟಿ ಆಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲಾದರೆ ಕುರ್ಚಿ ಬಿಟ್ಟು ಇಳಿಯಬೇಕಾತ್ತದೆ ಎಂದು ಸಣ್ಣ ಪುಟ್ಟ ವಿಪಕ್ಷಗಳ ಮುಖಂಡರನ್ನೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಕನಿಷ್ಠ ಪಕ್ಷ ಠೇವಣಿ ಉಳಿಸಿಕೊಳ್ಳಬೇಕು, ಸೋಲಿನ ಅಂತರವಾದರೂ ಕಡಿಮೆ ಮಾಡಿಕೊಳ್ಳಬೇಕು ಅಂತ ಸಿದ್ದರಾಮಯ್ಯನವರು ಮೂರು ದಿನ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದಾರೆ ಎಂದು ಅಶೋಕ್ ಟ್ವೀಟ್ ಮಾಡಿ ಗೇಲಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ ನಿನ್ನೆ ವರುಣಾ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ.

ನಿಮ್ಮ ಗ್ಯಾರೆಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ,
ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎಂಬಮ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ,
ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ ಈ ಪ್ರಶ್ನೆಗಳಿಗೆ
ಕರ್ನಾಟಕದ ಜನತೆ ತಮ್ಮ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.


Share this with Friends

Related Post