Tue. Dec 24th, 2024

ಬಿ ಎಸ್ ವೈ‌ ಹೇಳಿಕೆಗೆ ಸಿದ್ದರಾಮಯ್ಯ ಟೀಕೆ

Share this with Friends

ಮೈಸೂರು, ಮೇ.11: ಮಾಜಿ ಸಿಎಂ ಯಡಿಯೂರಪ್ಪ ಅವರು ಬರಗಾಲ ಇರುವುದರಿಂದ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿರುವುದಕ್ಕೆ‌ ಸಿಎಂ‌ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.

ಮೈಸೂರಿನ ತಮ್ಮ ನಿವಾಸದ‌ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಹಿಂದೆ ಸಾಲ ಮನ್ನಾ ಮಾಡಿ ಎಂದು ಕೇಳಿದಾಗ ನಮ್ಮ ಬಳಿ ಪ್ರಿಂಟಿಂಗ್ ಮಶೀನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು, ಅವರಿಗೆ ಈಗ ರೈತರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದರು.ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಪ್ರಧಾನಿ ಅವರು 10 ವರ್ಷ ಬಡವರ ಪರ ಕೆಲಸ ಮಾಡಲಿಲ್ಲ, ಕೊಟ್ಟ ಭರವಸೆ ಈಡೇರಿಸಿಲ್ಲ, ದೇಶದ ಪ್ರಧಾನ ಮಂತ್ರಿಯನ್ನು ಸೋಲಿಸಬೇಕು ಎಂಬುದು ವಿರೋಧ ಪಕ್ಷಗಳ ಬಯಕೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಧಾನಿ ಮೋದಿ ಸೋಲುವ ಭಯದಿಂದ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ, ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ಅವರ ಬಣ್ಣ ದೇಶದ ಜನರಿಗೆ ಗೊತ್ತಾಗಿದೆ,ಇದೇ ಹತಾಶೆಯಲ್ಲಿ ಅವರು ಈ ರೀತಿ ಮಾತನಾಡುತ್ತಿದ್ದಾರೆ,
ಇವರ ಭಾವನಾತ್ಮಕ ಮಾತುಗಳು ಜನರಿಗೆ ಗೊತ್ತಿದೆ. ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇ ಬೇಕು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.


Share this with Friends

Related Post