ಮೈಸೂರು: ಮುಡಾದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದರು.
ಮುಡಾ ಪ್ರಕರಣದಲ್ಲಿ ವಿಚಾರಣೆಗೆ ಬರುವಂತೆ ಕರೆದ ಹಿನ್ನೆಲೆ ದೂರುದಾರ ಸ್ನೇಹಮಯಿ ಕೃಷ್ಣ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಖಲೆಗಳಿಗೆ ಸಂಬಂಧಿಸಿದ ಯಾವುದೇ ನೋಟಿಸ್ ಬಂದಿಲ್ಲ. ಆದರೆ, ವಿಚಾರಣೆಯಲ್ಲಿ ಯಾವುದೇ ದಾಖಲಾತಿ ಕೋರಿದರೆ ನಾನು ಕೊಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
ಮೊದಲು ದೂರು ನೀಡಿದಾಗಲೇ ದಾಖಲಾತಿಗಳನ್ನು ಕೊಟ್ಟಿದ್ದೇನೆ, ಈಗ ಮತ್ತೆ ವಿಚಾರಣೆ ಸಂದರ್ಭದಲ್ಲಿ ದಾಖಲಾತಿಗಳನ್ನು ಕೇಳಿದರೆ ಕೊಡಲು ಸಿದ್ಧ ಎಂದರಲ್ಲದೆ ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಇಡಿಯಲ್ಲಿ ಎಫ್ಐಆರ್ ದಾಖಲಾಗಿದೆ,ಇದು ನಮಗೆ ಸಿಕ್ಕ ಜಯ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.
ಸಿಎಂ ಪತ್ನಿ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಸುಳ್ಳು ಆರೋಪ ಮಾಡುವುದಿಲ್ಲ. ಈವರೆಗಿನ ಎಲ್ಲಾ ಪ್ರಕರಣಗಳಲ್ಲೂ ಜಯಗಳಿಸಿದ್ದೇನೆ,
ಮುಂದೆಯೂ ಜಯ ದೊರೆಯಲಿದೆ ಎಂದು ಹೇಳಿದರು