Fri. Mar 6th, 2026

ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು

Share this with Friends

ಬೆಂಗಳೂರು:ಪ್ರತಿ ವರ್ಷದಂತೆ ಈ ವರ್ಷವೂ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06503 ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ದಿನಾಂಕ 13.02.2026 ರಂದು  (ಶುಕ್ರವಾರ) ರಾತ್ರಿ 07.15 ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 07.15 ಗಂಟೆಗೆ ವಿಜಯಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06504 ವಿಜಯಪುರ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು 16.02.2026 ರಂದು (ಸೋಮವಾರ) ಸಂಜೆ 05.30 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 06.30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ವಿಶೇಷ ರೈಲು ಸಂಚಾರದ ಮಾರ್ಗದಲ್ಲಿ ಈ ರೈಲುಗಳಿಗೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌.ಎಂ.ಎಂ. ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.ಈ ರೈಲು 22 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 02 ಎಸಿ 2-ಟೈರ್, 03 ಎಸಿ 3-ಟೈರ್, 11 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್ ಡಿ ಬೋಗಿಗಳು ಇರಲಿವೆ. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದೆ.


Share this with Friends

Related Post