Thu. Mar 5th, 2026

ಮಹಿಳಾ ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ವಿಶೇಷ ತರಬೇತಿ: ಅರ್ಜಿ ಆಹ್ವಾನ

Share this with Friends

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಸಿ.ಎಸ್.ಆರ್. ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಪತ್ರಕರ್ತೆಯರಿಗಾಗಿ ಮೂರು ದಿನಗಳ ವಿಶೇಷ ವಸತಿಯುತ ತರಬೇತಿ ಶಿಬಿರವನ್ನು ಆಯೋಜಿಸಿದೆ.

ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಾರ್ಚ್ 25 ರಿಂದ 27ರ ವರೆಗೆ ಈ ತರಬೇತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಜಿಟಲ್ ಮಾಧ್ಯಮದ ಸವಾಲುಗಳು, ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ, ಸಾಫ್ಟ್‌ಸ್ಕಿಲ್ ಅಭಿವೃದ್ಧಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ.

ಅರ್ಹತೆ ಮತ್ತು ದಾಖಲೆಗಳು:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಸಂಸ್ಥೆಗಳಲ್ಲಿ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಮಹಿಳಾ ಪತ್ರಕರ್ತೆಯರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿಯೊಂದಿಗೆ ಭಾವಚಿತ್ರ, ವಯಸ್ಸಿನ ದಾಖಲೆ, ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ ಅಥವಾ ಅಧಿಕೃತ ಗುರುತಿನ ಚೀಟಿ ಹಾಗೂ ಸೇವಾನುಭವದ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಸೌಲಭ್ಯಗಳು:

ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಆಯ್ಕೆಯಾದ ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ಗೂಗಲ್ ಫಾರ್ಮ್ ಲಿಂಕ್ (https://forms.gle/tozr4GxUQibDHBvk9) ಮೂಲಕ ಆನ್‌ಲೈನ್‌ನಲ್ಲಿ ಮಾಹಿತಿಗಳನ್ನು ಭರ್ತಿ ಮಾಡಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 10, 2026 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 


Share this with Friends

Related Post