Tue. Dec 24th, 2024

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹ:ಸಿದ್ದರಾಮಯ್ಯ

Share this with Friends

ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬರೀ ಊಹಾಪೋಹಗಳು ಎದ್ದಿವೆ‌,ಇದರ ಅಗತ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿಎಂ ಬದಲಾವಣೆ ಬಗ್ಗೆ ಊಹಾಪೋಹ ಬೇಕಿಲ್ಲ ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪ ಮಾಡಿ ರಾಜಿನಾಮೆ ಕೇಳಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ತಿಳಿಸಿದರು.

ರಾಜ್ಯದ ಕಾಂಗ್ರೆಸ್ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ
ಅದರಲ್ಲಿ ವಿಶೇಷವೇನಿಲ್ಲಾ‌ ಎಂದರು‌ ಸಿದ್ದು.

ಜಾತಿಗಣತಿಗೆ ಸಂಬಂಧಿಸಿದಂತೆ ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ,ಆದರೆ ಅದರ ಬಗ್ಗೆಯೂ ವರಿಷ್ಠರು ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು

ವಿರೋಧಪಕ್ಷದ ನಾಯಕ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ ನಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ಸಿಎಂ ಸವಾಲು ಹಾಕಿದರು.


Share this with Friends

Related Post