ಮೈಸೂರು, ಜೂ.3: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರವಾಗಿ
ಮತಯಾಚನೆ ಮಾಡಲಾಯಿತು.
ಮೈಸೂರಿನ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಗುಬ್ಬಚ್ಚಿ ಶಾಲೆ ಬಳಿ ಕೆ.ಆರ್. ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ ಅವರು ಮತಯಾಚಿಸಿದರು.
ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರು ಗೆದ್ದು ಬಂದರೆ ಶಿಕ್ಷಕರ ಪರವಾಗಿ ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿ ಸಮಸ್ಯೆ ಬಗೆ ಹರಿಸಲು ಶ್ರಮಿಸುತ್ತಾರೆ ಎಂದು ಈ ವೇಳೆ ಶ್ರೀವತ್ಸ ತಿಳಿಸಿದರು.
ಆದ್ದರಿಂದ ಶಿಕ್ಷಕರು ಮೊದಲ ಪ್ರಾಶಸ್ತ್ಯ ಮತಗಳನ್ನು ವಿವೇಕಾನಂದ ಅವರಿಗೆ ನೀಡಬೇಕೆಂದು ಮನವಿ ಮಾಡಿದರು.