ಮೈಸೂರು, ಮೇ.14:ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಾಕ್ಟರ್ ಯತೀಂದ್ರ ಯುವ ಬ್ರಿಗೇಡ್ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೆಸರಿನಲ್ಲಿ ಅವರ ಭಾವಚಿತ್ರ ಹಿಡಿದು ನಾಡಿನ ಜನತೆಯ ಪರವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಂತರ ಸಿಹಿ ವಿತರಿಸಿ ಅಭಿಮಾನಿಗಳು ಸಂಭ್ರಮಿಸಿದರು. ಕೇಂದ್ರದಲ್ಲೂ ಈ ಬಾರಿ ಕಾಂಗ್ರೆಸ್ ಸರ್ಕಾರ ಬರಲಿ ಹಾಗೂ ಮೈಸೂರು ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಬಹುಮತದಿಂದ ಗೆಲ್ಲಲಿ, ರಾಜ್ಯದಲ್ಲಿ ಸರ್ಕಾರ ಐದು ವರ್ಷ ಸುಭದ್ರವಾಗಿರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ ಕನಿಷ್ಟ 20 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರಕಾರದ 10 ವರ್ಷಗಳ ಆಡಳಿತದಿಂದ ಜನರು ಬೇಸತ್ತಿದ್ದು, ವಿದೇಶದಿಂದ ಕಪ್ಪುಹಣ ತರುತ್ತೇನೆ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣ ಎಂದು ಹೇಳಿ ಯಾವುದೇ ಜನಪರ ಕೆಲಸ ಮಾಡಿಲ್ಲ. ಉದ್ಯಮಿಗಳ ಸಾಲ ಮನ್ನಾ, ಬೆಲೆ ಏರಿಕೆ, ಸಾಲ ಮಾಡಿರುವುದೇ ಮೋದಿ ಸರಕಾರದ ಸಾಧನೆಯಾಗಿದೆ ಎಂದು ಬಸವರಾಜ್ ಬಸಪ್ಪ ಟೀಕಿಸಿದರು.
ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್,
ಕಾಂಗ್ರೆಸ್ ಮುಖಂಡರಾದ ಜೆ.ಜೆ ಆನಂದ್,
ಡಾ ಯತೀಂದ್ರ ಯುವ ಬ್ರಿಗೇಡ್ ಅಧ್ಯಕ್ಷ ಗೌರಿಶಂಕರ್ ನಗರದ ಶಿವಕುಮಾರ್,ಎಚ್ ಎಸ್ ದಿನೇಶ್, ರವಿಚಂದ್ರ, ವರುಣ ಮಹದೇವ್, ಶಿವಕುಮಾರ್, ನವೀನ್ ಕೆಂಪಿ, ರವಿತೇಜ, ವಿನಯ್ ಕಣಗಾಲ್, ನವೀನ್ ಮತ್ತಿತರ ಮುಖಂಡರು ಹಾಜರಿದ್ದರು.