Mon. Dec 23rd, 2024

ರಾಜ್ಯ ಸರ್ಕಾರದ ಬೊಕ್ಕಸ ಖಾಲಿ: ಎಚ್‌ ಜಿ ಗಿರಿಧರ್ ಟೀಕೆ

Share this with Friends

ಮೈಸೂರು,ಫೆ.9: ಉಚಿತ ಯೋಜನೆಗಳ ಹೆಸರಿನಲ್ಲಿ ರಾಜ್ಯಸರ್ಕಾರದ ಬೊಕ್ಕಸ ಖಾಲಿಯಾಗಿದ್ದು,ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್‌ ಜಿ ಗಿರಿಧರ್ ಆರೋಪಿಸಿದ್ದಾರೆ.

ಒಂದು ಜನಪರ ಸರ್ಕಾರ ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭಾರತ್ ಅಕ್ಕಿ ಯೋಜನೆಯನ್ನು ಇಡೀ ಭಾರತ ಹೃತ್ಪೂರ್ವಕವಾಗಿ ಸ್ವಾಗತಿಸಿದೆ.

ಸಮಸ್ತ ಭಾರತೀಯರಿಗೆ ಕೈಗೆಟುಕುವ ಬೆಲೆಯಲ್ಲಿ ಅಕ್ಕಿ ಲಭಿಸಬೇಕು ಮತ್ತು ಕಾಳಸಂತೆಗೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಭಾರತ್ ಅಕ್ಕಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಗಿರಿಧರ್ ತಿಳಿಸಿದ್ದಾರೆ.

ಈ ಯೋಜನೆಯಲ್ಲಿ ಕೇವಲ 29 ರೂಪಾಯಿಗೆ ಒಂದು ಕೆಜಿ ಉತ್ಕೃಷ್ಟ ಗುಣಮಟ್ಟದ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಇದರಿಂದ ಎಲ್ಲರಿಗೂ ಆಹಾರ ಭದ್ರತೆ ಒದಗಿಸಲು ಸಾಧ್ಯವಾಗುತ್ತದೆ.

ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ, ಜನರಿಗೂ ನೆರವಾಗುವಂತಹ ಜನಪರ ಯೋಜನೆಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿದೆ.

ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಮೈಸೂರಿನ ನಾಗರಿಕರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಗಿರಿಧರ್ ವಿನಂತಿಸಿದ್ದಾರೆ.


Share this with Friends

Related Post