Tue. Dec 24th, 2024

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರು

Share this with Friends

ನವದೆಹಲಿ,ಜೂ.24: ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಕನ್ನಡಾಭಿಮಾನ ಮೆರೆದಿದ್ದಾರೆ

ಸಂಸತ್‌ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಹೆಚ್‍.ಡಿ.ಕುಮಾರಸ್ವಾಮಿ,ಪ್ರಹ್ಲಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ,ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ರಾಜ್ಯದಿಂದ ಆಯ್ಕೆಯಾದ ನೂತನ ಸಂಸದರು

ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಪ್ರವೇಶಿಸಿದ್ದು ವಿಶೇಷ.


Share this with Friends

Related Post