ಮೈಸೂರು: ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮ ಸಪ್ಟೆಂಬರ್ 23 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಸೆ. 23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪನವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಜಿಲ್ಲೆಯ ಶಾಸಕರುಗಳು,ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಜನಸ್ಪಂದನ ಸಭೆಗೆ ಜಿಲ್ಲೆಯ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿ, ಪರಿಹಾರ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.