Tue. Dec 24th, 2024

ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಡಿಸಿ,ಕಮಿಷನರ್

Share this with Friends

ಮೈಸೂರು, ಏ.23: ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು
ಸ್ಟ್ರಾಂಗ್ ರೂಮ್ ಪರಿಶೀಲಿಸಿದರು.

ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಕೆ.ವಿ.ರಾಜೇಂದ್ರ ಹಾಗೂ ರಮೇಶ್ ಬಾನೋತ್ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಟ್ರಾಂಗ್ ರೂಮ್ ನಲ್ಲಿ ಮತಯಂತ್ರಗಳ ರಕ್ಷಣೆ ಹಾಗೂ ಭದ್ರತೆ ಕುರಿತು ಮುಂಜಾಗ್ರತ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ವಿನಯ್ ಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಹೇಶ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.


Share this with Friends

Related Post