Mon. Dec 23rd, 2024

ಡೇಂಘೀಗೆ ವಿದ್ಯಾರ್ಥಿನಿ ಬಲಿ:ಚಿಕ್ಕಮಗಳೂರಿನಲ್ಲಿ ಹೆಚ್ಚಿದ‌ ಆತಂಕ

Share this with Friends

ಚಿಕ್ಕಮಗಳೂರು,ಫೆ.8: ಡೇಂಘೀ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದು ಚಿಕ್ಕಮಗಳೂರಿನಲ್ಲಿ ಆತಂಕ ಸೃಷ್ಟಿ ಯಾಗಿದೆ.

ಡೇಂಘೀಗೆ ಜಿಲ್ಲೆಯಲ್ಲಿ ಮೊದಲ ಬಲಿ ಇದಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಹದಿನೆಂಟು ‌ವರ್ಷದ ಸಹನಾ ಬಾನು ಡೆಂಘಿಗೆ ಬಲಿಯಾದ ವಿದ್ಯಾರ್ಥಿನಿ.

ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಸಹರಾ ಬಾನು
ಚಿಕಿತ್ಸೆ ಪಡೆಯುತ್ತಿದ್ದರು.

ಈಕೆಯ ನಿಧನದಿಂದ ಜಿಲ್ಲೆಯಲ್ಲಿ ತೀವ್ರ ಆತಂಕ‌‌ ಎದುರಾಗಿದ್ದು,ಡೇಂಘೀ ಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


Share this with Friends

Related Post