Mon. Dec 23rd, 2024

ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಅಂಬರೀಶ್

SUmalata Join BJP
Share this with Friends

ಬೆಂಗಳೂರು, ಏ,5 : ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಯಡಿಯೂರಪ್ಪ ಅವರು ಪಕ್ಷದ ಬಾವುಟ ನೀಡಿ ಬಿಜೆಪಿ ಶಾಲು ಹಾಕಿ ಬಿಜೆಪಿಗೆ ಬರಮಾಡಿಕೊಂಡರು.

ಎರಡು ದಿ ದಿನಗಳ ಹಿಂದೆ ಮಂಡ್ಯದಲ್ಲಿ ಅಭಿಮಾನಿಗಳ ಸಮಾವೇಶ ನಡೆಸಿದ್ದ ಸುಮಲತಾ ಮುಂದಿನ ರಾಜಕೀಯ ನಡೆಯ ಬಗ್ಗೆ ಘೋಷಣೆ ಮಾಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಜೆಪಿ ಸೇರಿ ಮೈತ್ರಿ ಅಭ್ಯರ್ಥಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಅದರಂತೆ ಅಧಿಕೃತವಾಗಿ ಶುಕ್ರವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದರು.

ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಸುಮಲತಾ ಅಂಬರೀಶ್ ‌ಈ‌ ಹಿಂದೆ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ ಆಗಿರಲಿಲ್ಲ.

ಈ ವೇಳೆ ಮಂಡ್ಯ ಕ್ಷೇತ್ರದ ಬೆಂಬಲಿಗರು ಸಹ ಬಿಜೆಪಿ ಸೇರಿದ್ದು ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಸೇರಿ ಹಲವರು ಉಪಸ್ಥಿತರಿದ್ದರು.


Share this with Friends

Related Post