ಮೈಸೂರು,ಜೂ.9: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಯದುವೀರ್ ಒಡೆಯರ್ ಸೇನೆ ಹಾಗೂ ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿ ಆನಂತರ ಸಾರ್ವಜನಿಕರಿಗೆ ಚಹಾ ವಿತರಿಸಿ ಸಂಭ್ರಮಿಸಲಾಯಿತು.
ಈ ವೇಳೆ ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ ಮಾತನಾಡಿ,ದೇಶದ ಎಲ್ಲ ಜಾತಿ, ಧರ್ಮ, ರಾಜಕೀಯ ಶಕ್ತಿಗಳು ಒಗ್ಗೂಡಿ ಷಡ್ಯಂತ್ರ ನಡೆಸಿದರೂ ಮೋದಿ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ
ಪ್ರಬುದ್ಧ ಮತದಾರರ ಬೆಂಬಲ ಬಿಜೆಪಿಗೆ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು.
ನರೇಂದ್ರ ಮೋದಿ ಯವರು ಮೂರನೇ ಬಾರಿಗೆ ನಮ್ಮ ದೇಶದ ಪ್ರಧಾನಿ ಮಂತ್ರಿ
ಯಾಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ತಿಳಿಸಿದರು.
ಬಡವರ ಪರ ಕಾಳಜಿ ಇರುವ ಏಕೈಕ ವ್ಯಕ್ತಿ ಇದ್ದರೆ ಅದು ನಮ್ಮ ನರೇಂದ್ರಮೋದಿ , ಮೋದಿ ತಮ್ಮ ಅಧಿಕಾರದ ಅವಧಿಯಲ್ಲಿ ಅನೇಕ ದಿಟ್ಟ ನಿರ್ಧಾರಗಳ ಜೊತೆಗೆ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತ ವಿಶ್ವಗುರುವಾಗಲಿದೆ ಎಂದು ಸಂದೇಶ್ ಸ್ವಾಮಿ ಹೇಳಿದರು
ಮಾಜಿ ಮಹಾಪೌರರಾದ ಶಿವಕುಮಾರ್ ಮಾತನಾಡಿ,ದೇಶದಲ್ಲಿ ಮತದಾರ ಎನ್‌ಡಿಎ ಒಕ್ಕೂಟಕ್ಕೆ ಸ್ಪಷ್ಟ ಬಹುಮತ ನೀಡಿದ್ದು
ಮುಂದಿನ 10 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಸುಭದ್ರ ಆಡಳಿತ ನೀಡಲಿದೆ, ದೇಶದಲ್ಲಿ ಸಾಕಷ್ಟು ಬದಲಾವಣೆ ತರಲಿದೆ, ಭಾರತ ಈ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಮೂಡಾ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಮ ವಿ ರಾಮ್ ಪ್ರಸಾದ್, ಸೌಮ್ಯ ಉಮೇಶ್, ಜಗದೀಶ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಯದುವೀರ್ ಒಡೆಯರ ಸೇನೆ ಅಧ್ಯಕ್ಷ ಬೈರತಿ ಲಿಂಗರಾಜು, ಜೆ.ಡಿ.ಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಸುಚೇಂದ್ರ, ಜನಸೇವಕ ಯುವ ಬ್ರಿಗೇಡ್ ಅಧ್ಯಕ್ಷ ರಾಘವೇಂದ್ರ, ಉಮೇಶ್, ಬಿಲ್ಲಯ್ಯ ಅಶೋಕ ಪುರಂ, ಸದಾಶಿವ, ಚಕ್ರಪಾಣಿ, ಮತ್ತಿತರರು ಹಾಜರಿದ್ದರು.