Fri. Jan 10th, 2025

ಎಸ್ ಬಿ ಐ ಗೆ ಸುಪ್ರೀಂ ಮತ್ತೆ ತಪರಾಕಿ

Share this with Friends

ನವದೆಹಲಿ,ಮಾ.18: ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಚುನಾವಣಾ ಬಾಂಡ್‌ಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ (ಎಸ್ ಬಿ ಐ) ಮತ್ತೆ ಹಿನ್ನಡೆಯಾಗಿದ್ದು, ಚುನಾವಣಾ ಬಾಂಡ್‌ಗಳ ಯುನಿಕ್‌ ನಂಬರ್‌ ಸೇರಿ ಎಲ್ಲ ಮಾಹಿತಿಯನ್ನೂ ಶೀಘ್ರ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‌ ಇಂದು ಆದೇಶಿಸಿದೆ.

ಚುನಾವಣಾ ಬಾಂಡ್ ಗಳ ಕುರಿತು ಎಲ್ಲ ಮಾಹಿತಿಯನ್ನು ಎಸ್‌ಬಿಐ ಒದಗಿಸಬೇಕು. ಆದರೆ ಎಸ್ ಬಿಐ ಕೆಲ ನಿಯಮಿತ ಮಾಹಿತಿಗಳನ್ನಷ್ಟೇ ಒದಗಿಸಿದೆ.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿ ಇರುವ ಅಫಿಡವಿಟ್‌ ಅನ್ನು ಎಸ್‌ಬಿಐ ಕೋರ್ಟ್ ಗೆ ನೀಡಬೇಕು. ಆಯ್ಕೆ ಮಾಡಲಾದ ಮಾಹಿತಿಯನ್ನಷ್ಟೇ ನೀಡಿದರೆ ಆಗುವುದಿಲ್ಲ. ಯುನಿಕ್‌ ನಂಬರ್‌ ಸೇರಿ ಸಮಗ್ರ ಮಾಹಿತಿಯನ್ನು ಒದಗಿಸಬೇಕು. ಇದುವರೆಗೆ ಚುನಾವಣೆ ಆಯೋಗಕ್ಕೆ ಎಸ್‌ಬಿಐ ಎರಡು ಪಟ್ಟಿ ನೀಡಿದೆ. ಈಗ ಎಲ್ಲ ಮಾಹಿತಿ ಒದಗಿಸಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಚುನಾವಣಾ ಬಾಂಡ್‌ಗಳಿಗೆ ವಿಶೇಷ ಗುರುತಿನ ಸಂಖ್ಯೆ ಇರುತ್ತದೆ. ಇದನ್ನೇ ಯುನಿಕ್‌ ನಂಬರ್‌ ಎನ್ನಲಾಗುತ್ತದೆ. ಈ ಯುನಿಕ್‌ ನಂಬರ್‌ನಿಂದ ಬಾಂಡ್‌ ಖರೀದಿಸಿದ ದೇಣಿಗೆದಾರರು, ಅವರು ನೀಡಿದ ಮೊತ್ತ ಹಾಗೂ ರಾಜಕೀಯ ಪಕ್ಷಗಳು ಸ್ವೀಕರಿಸಿದ ಹಣದ ಬಗ್ಗೆ ನಿಖರ ಮಾಹಿತಿ ದೊರೆಯುತ್ತದೆ.


Share this with Friends

Related Post