Mon. Dec 23rd, 2024

ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ವಿಧಿವಶ

Share this with Friends

ನವದೆಹಲಿ,ಫೆ.21: ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನರಾಗಿದ್ದಾರೆ.

ಅವರಿಗೆ 95 ವರ್ಷ ವಯಸ್ಸಾಗಿತ್ತು,ವಯೊಸಹಜ ಕಾಯಿಲೆಯಿಂದ ಅವರು ನಿನ್ನೆ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ.

ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿ ಕಾರ್ಯ ನಿರ್ವಹಿಸಿದರು. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು.

ಕೇಂದ್ರ ಸರ್ಕಾರ ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು, ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ನಾರಿಮನ್ ಜನವರಿ 10, 1929 ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು, ಬಾಂಬೆ ಹೈಕೋರ್ಟ್‌ನಲ್ಲಿ ಕಾನೂನು ಅಭ್ಯಾಸ ಪ್ರಾರಂಭಿಸಿದರು.

ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಅವರು ಎಎಎಸ್ ​ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

1975ರಲ್ಲಿ ಘೋಷಿಸಲಾದ ತುರ್ತು ಪರಿಸ್ಥಿತಿ ನಿರ್ಧಾರದಿಂದ ನಾರಿಮನ್ ಅವರು ಬೇಸರಗೊಂಡು ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರವನ್ನು ವಿರೋಧಿಸಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಪಾಲಿ ಎಸ್.ನಾರಿಮನ್ ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್ ​ ನ್ಯಾಯಮೂರ್ತಿಯಾಗಿದ್ದಾರೆ.


Share this with Friends

Related Post